ಹರಪನಹಳ್ಳಿಯಲ್ಲಿ ನಾಳೆ ಬಿಜೆಪಿ ವಿಜಯಸಂಕಲ್ಪ ಯಾತ್ರೆ

ಹರಪನಹಳ್ಳಿಯಲ್ಲಿ ನಾಳೆ  ಬಿಜೆಪಿ ವಿಜಯಸಂಕಲ್ಪ ಯಾತ್ರೆ

ಹರಪನಹಳ್ಳಿ, ಮಾ.14- ಹರ ಪನಹಳ್ಳಿಗೆ ಆಗಮಿಸುತ್ತಿರುವ ವಿಜಯ ಸಂಕಲ್ಪ ಯಾತ್ರೆಗೆ ಪಕ್ಷದ ತಾಲ್ಲೂಕಿನ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಶಾಸಕ ಜಿ.ಕರುಣಾಕರ ರೆಡ್ಡಿ  ಹೇಳಿದರು. 

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಇವರೆಡೂ ಡಬಲ್ ಇಂಜಿನ್ ಸರ್ಕಾರ ಇದ್ದು, ದೇಶ ಮತ್ತು ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಎರಡೂ ಕಡೆ ಒಂದೇ ಸರ್ಕಾರ ಇದ್ದಲ್ಲಿ ಅಭಿವೃ ದ್ಧಿಯಾಗಲು ಸಹಕಾರಿಯಾಗಲಿದೆ. ಈ ಬೃಹತ್ ಸಮಾವೇಶಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಜಗದೀಶ್‌ ಶೆಟ್ಟರ್, ಭಗವಂತ ಕೂಬಾ, ಶ್ರೀರಾಮುಲು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ತಾಲ್ಲೂಕು ಸಂಚಾಲಕ ಚಂದ್ರ ಶೇಖರ ಪೂಜಾರ್‌  ಮಾತನಾಡಿ, ರಾಜ್ಯದ ನಾಲ್ಕು ದಿಕ್ಕಿನಿಂದ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಿದ್ದು, ಮಾ.16ರಂದು ಹರಪನಹಳ್ಳಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಜರುಗಲಿದೆ. ಅಂದು ಹೂವಿನಹಡಗಲಿಯಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ, ಸಂಜೆ 5ಕ್ಕೆ ತಾಲ್ಲೂಕಿನ ಕಾನಹಳ್ಳಿ ಗ್ರಾಮದ ಬಳಿ ವಿಜಯಸಂಕಲ್ಪ ಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುವುದು ಎಂದರು. ಸಂಜೆ 5.30ಕ್ಕೆ ಬೃಹತ್ ಸಮಾವೇಶವು ಅಮರನಾಥ ಪಾಟೀಲ್, ಸುನೀಲ್ ಮಲ್ಕಪ್ಪ, ಸಿದ್ದೇಶ್‌ ಯಾದವರ ಇವರ ನೇತೃತ್ವದಲ್ಲಿ ಜರುಗಲಿದೆ. ಈ ಸಮಾವೇಶಕ್ಕೆ ತಾಲ್ಲೂಕಿನಿಂದ 25 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದರು.

ರಾಜ್ಯ ಬಿಜೆಪಿ ಸಹಕಾರಿ ಪ್ರಕೋಷ್ಟದ ಸಂಚಾಲಕ ಜಿ.ನಂಜನಗೌಡ್ರು ಮಾತನಾಡಿ, ವಿಜಯ ಸಂಕಲ್ಪ ಯಾತ್ರೆಯು ರಾಜ್ಯದ 224 ಕ್ಷೇತ್ರಗಳಲ್ಲಿ ಸಂಚರಿಸಲಿದ್ದು, ಸಮಾರೋಪ ಸಮಾರಂಭ ದಾವಣಗೆರೆಯಲ್ಲಿ ನಡೆಯಲಿದೆ. ಇದಕ್ಕೆ ನರೇಂದ್ರ ಮೋದಿಯವರು ಆಗಮಿಸುವರು ಎಂದ ಅವರು, ಮುಂಬರುವ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿ ಬಿಜೆಪಿ ಸದೃಢವಾಗಿದೆ ಎಂದ ಅವರು, ಕಾಂಗ್ರೆಸ್‍ನ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಡಿಪಾಸಿಟ್ ಕಳೆದುಕೊಳ್ಳುತ್ತಿದೆ. ಹಾಗಾಗಿ ಹರಪನಹಳ್ಳಿ ಸೇರಿದಂತೆ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಸತ್ತೂರು ಹಾಲೇಶ್, ಪ್ರಧಾನ ಕಾರ್ಯದರ್ಶಿ ಉದಯಕುಮಾರ, ಪುರಸಭೆ ಸದಸ್ಯರಾದ ಎಂ.ಕೆ.ಜಾವೀದ್, ಕಿರಣ್‍ಕುಮಾರ್, ಮುಖಂಡರಾದ  ಎಂ.ಪಿ. ನಾಯ್ಕ, ಮುತ್ತಿಗಿ ವಾಗೀಶ್,  ಕೆಂಗಳ್ಳಿ ಪ್ರಕಾಶ್, ವಿನಾಯಕ ಭಜಂತ್ರಿ, ಮಂಜ್ಯಾನಾಯ್ಕ, ಬಿ.ವೈ.ವೆಂಕಟೇಶ್‍ನಾಯ್ಕ, ಮಲ್ಲಿಕಾರ್ಜುನ ಮೈದೂರು, ಕಂಚಿಕೇರಿ ವೀರಣ್ಣ,  ಶಂಕರಪ್ಪ, ತಲವಾಗಲು ನಂದೀಶ, ಸುರೇಶ, ಜೆ.ಓಂಕಾರಗೌಡ, ವಿಜಯಪ್ಪ, ರೇಖಾ ಸೇರಿದಂತೆ ಇತರರು ಇದ್ದರು.

error: Content is protected !!