ದಾವಣಗೆರೆ, ಮಾ.23- ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ. 2015 ರಲ್ಲಿ ಶ್ರವಣಬೆಳಗೊಳದಲ್ಲಿ ನಡೆದ 81 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸು ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳಿಗೆ ಸಲ್ಲುತ್ತದೆ. ಅವರ ನಿಧನವು ಧಾರ್ಮಿಕ ಮಠ ಪರಂಪರೆಗೆ ಮಾತ್ರವಲ್ಲದೇ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ವಾಮದೇವಪ್ಪ ತಿಳಿಸಿದ್ದಾರೆ.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಬಿ.ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿಗಳಾದ ಸಿ.ಜಿ.ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ಸಹ ಕಾರ್ಯದರ್ಶಿಗಳಾದ ಇ.ಎಂ.ಮಂಜುನಾಥ, ಕೆ.ಎಸ್.ವೀರೇಶ್‌ಪ್ರಸಾದ್ ಅವರುಗಳು ಶ್ರೀಗಳ ನಿಧನಕ್ಕೆ ಗೌರವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.