ದಾವಣಗೆರೆ, ಮಾ. 24 – ನಾಳೆ ದಿನಾಂಕ 25 ರ ಶನಿವಾರ ಪ್ರಧಾನ ಮಂತ್ರಿಗಳ ಪ್ರವಾಸ ಕಾರ್ಯಕ್ರಮ ನಗರದಲ್ಲಿ ಏರ್ಪಾಡಾಗಿರುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ. ಕಾರಣ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಮುಂಚಿತವಾಗಿ ಆಗಮಿಸುವಂತೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಕರೆ ನೀಡಿದ್ದಾರೆ. ನಾಳೆ ಶನಿವಾರ ದ್ವಿತೀಯ ಪಿಯುಸಿ ರಾಜ್ಯ ಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ವಿಷಯ ಪರೀಕ್ಷೆಗಳು ಜರುಗಲಿದ್ದು, ಸಂಚಾರ ದಟ್ಟಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬಸ್, ಆಟೋ, ಶಾಲಾ ವಾಹನಗಳ ಮೂಲಕ ಪರೀಕ್ಷಾ ಕೇಂದ್ರಕ್ಕೆ ಸಕಾಲದಲ್ಲಿ ತಲುಪಲು ಯಾವುದೇ ತೊಂದರೆಯಾಗದಂತೆ ಅನುಕೂಲ ಮಾಡಿಕೊಡಲು ಸಾರ್ವಜನಿಕರಿಗೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.
January 13, 2025