ನಾಳೆ ನಗರಕ್ಕೆ ಪ್ರಧಾನಿ ಮೋದಿ: ವಾಹನಗಳ ಮಾರ್ಗ ಬದಲಾವಣೆ

ಖಾಸಗಿ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ತಾತ್ಕಾಲಿಕ ಸ್ಥಳಾಂತರ

25ರಂದು ಎಲ್ಲಾ ಭಾರೀ ವಾಹನ ಸಂಚಾರ ನಿಷೇಧ

ದ್ವಿತೀಯ ಪಿಯು ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಅಡಚಣೆ ಮಾಡದಂತೆ ಸೂಚನೆ

ಕಾರ್ಯಕ್ರಮ ಸ್ಥಳದ ಸುತ್ತ ಮುತ್ತ ಎಲ್ಲಾ ರೀತಿ ವಾಹನ ನಿಷೇಧ

ದಾವಣಗೆರೆ, ಮಾ. 24- ನಾಳೆ ಮಾ.25ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ವ್ಯವಸ್ಥೆಯಲ್ಲಿ ಬದಲಾವ ಣೆಗಳನ್ನು ಮಾಡಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.

ಬೇರೆ ಜಿಲ್ಲೆಗಳಿಂದ ಕಾರ್ಯಕ್ರ ಮಕ್ಕೆ ಬರುವ ವಾಹನ ಪಾರ್ಕಿಂಗ್ ಸ್ಥಳಗಳ ವಿವರ: ಚಿಕ್ಕಮಗಳೂರು, ಶಿವಮೊಗ್ಗ, ಭದ್ರಾವತಿ, ಬೀರೂರು, ಕಡೂರು, ಶೃಂಗೇರಿ, ಬೆಂಗಳೂರು, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಗಳೂರು ಜಿಲ್ಲೆಗಳಿಂದ ಬಾಡಾ ಕ್ರಾಸ್‌ನಿಂದ ದಾವಣಗೆರೆ ನಗರಕ್ಕೆ ಪ್ರವೇಶ ಮಾಡುವ ವಾಹನಗಳಿಗೆ ಎಪಿಎಂಸಿ ಮತ್ತು ಚಿಕ್ಕನಹಳ್ಳಿಗಳಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.

 ಚನ್ನಗಿರಿ, ಶಿವಮೊಗ್ಗ, ಭದ್ರಾವತಿ, ಬೀರೂರು, ಕಡೂರು, ಮಂಗಳೂರು ಕಡೆಯಿಂದ ಹದಡಿ ರಸ್ತೆ ಮೂಲಕ ದಾವಣಗೆರೆ ನಗರಕ್ಕೆ ಪ್ರವೇಶ ಮಾಡುವ ವಾಹನಗಳನ್ನು ಡಿಆರ್‌ಎಂ ಸೈನ್ಸ್ ಕಾಲೇಜ್, ಹೈಸ್ಕೂಲ್ ಮೈದಾನ, ಯು.ಟಿ.ಡಿ.ಟಿ ಇಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

 ಹುಬ್ಬಳ್ಳಿ, ಧಾರಾವಾಡ, ಬೆಳಗಾವಿ, ಗದಗ, ಹಾವೇರಿ, ಹರಿಹರ ಕಡೆಯಿಂದ ಬೈಪಾಸ್ ರಸ್ತೆ ಮುಖಾಂತರ ಹಳೆ ಕುಂದುವಾಡ ಕಡೆಯಿಂದ ಬರುವ ವಾಹನಗಳನ್ನು ಕುಂದುವಾಡ ಕೆರೆ ಹತ್ತಿರದ ಜಾಗದಲ್ಲಿ ಪಾರ್ಕಿಂಗ್ ಮಾಡಬೇಕಿದೆ.

ಹರಪನಹಳ್ಳಿ-ಬಳ್ಳಾರಿ ವಿಜಯನಗರ ಕೊಪ್ಪಳ, ವಿಜಯಪುರ, ರಾಯಚೂರು, ಬೀದರ್, ಕಲ್ಬುರ್ಗಿ, ಗದಗ, ಯಾದಗಿರಿ, ಹೊಸಪೇಟೆ ಕಡೆಯಿಂದ ಬರುವ ವಾಹನಗಳು ಕೊಂಡಜ್ಜಿ, ಆವರಗೊಳ್ಳ ಮುಖಾಂತರ ಕಾರ್ಯಕ್ರಮ ಸ್ಥಳಕ್ಕೆ ಪ್ರವೇಶ ಬರುವ ವಾಹನಗಳನ್ನು ಕೇಂದ್ರೀಯ ವಿದ್ಯಾಲಯದ ಜಾಗದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.

ಚಳ್ಳಕೆರೆ, ಮೊಳಕಾಲ್ಮೂರು, ಕೂಡ್ಲಿಗಿ ಜಿಲ್ಲೆಗಳಿಂದ ಜಗಳೂರು ರಸ್ತೆ ಮೂಲಕ ಬರುವ ವಾಹನಗಳಿಗೆ ಬಡಗಿ ಕೃಷ್ಣಪ್ಪ ಲೇ ಔಟ್‌ನಲ್ಲಿ ಪಾರ್ಕಿಂಗ್‌ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಧಾನಿ ಅವರ ಸಮಾರಂಭ ನಡೆಯುವ ಸ್ಥಳದ ಸುತ್ತಮುತ್ತ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ತಮ್ಮೊಂದಿಗೆ ಹಾಲ್ ಟಿಕೆಟ್ ಮತ್ತು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಜೊತೆಯಲ್ಲಿಟ್ಟುಕೊಳ್ಳುಬೇಕು. ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಪೊಲೀಸರು ಯಾವುದೇ ಅಡಚಣೆ ಮಾಡದೆ  ಅನುಕೂಲ ಮಾಡಿಕೊಡುವಂತೆ ಸೂಚಿಸಲಾಗಿದೆ.

ದಾವಣಗೆರೆ ನಗರದಲ್ಲಿ ಎಲ್ಲಾ ಖಾಸಗಿ ಮತ್ತು ಕೆಎಸ್.ಆರ್‌ಟಿಸಿ ಬಸ್‌ಗಳ ಬಸ್ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ನಗರದ ಹೊರವಲಯಕ್ಕೆ ಸ್ಥಳಾಂತರಿಸಲಾಗಿದೆ. ದಿ.25 ರಂದು ಎಲ್ಲಾ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.  ಕಾರ್ಯಕ್ರಮ ನಡೆಯುವ ಸ್ಥಳದಿಂದ 2 ಕಿ.ಮೀ. ವ್ಯಾಪ್ತಿ ಸುತ್ತಳತೆಯಲ್ಲಿ  ಡ್ರೋನ್ ಹಾರಾಟವನ್ನು  ನಿಷೇಧಿಸಲಾಗಿದೆ.

error: Content is protected !!