ರಾಣೇಬೆನ್ನೂರು,ಮಾ.27- ತಾವು ಯಾರೊಂದಿಗೂ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೀಗಾಗಿ ಕಾರ್ಯಕರ್ತರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಿ.ಪಂ.ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ಕಳೆದ 20 ವರುಷಗಳಿಂದ ಗುರುತಿಸಿಕೊಂಡಿದ್ದು, ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದೆ, ಪಕ್ಷಕ್ಕಾಗಿ ಹಗಲಿರುಳು ಕೆಲಸ ಮಾಡುವ ಮೂಲಕ ಸಂಘಟನೆ ಮಾಡಿರುವೆ. ಆದ್ದರಿಂದ ಪಕ್ಷದಿಂದ ಟಿಕೆಟ್ ಕೇಳಲಾಗಿದೆ. ಇದನ್ನು ಬಿಟ್ಟು ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ. ಕೆಲವು ಕಿಡಿಗೇಡಿಗಳು ತಾವು ಹಣಕ್ಕೆ ಹೊಂದಾಣಿಕೆ ಮಾಡಿಕೊಂಡಿದ್ದೇನೆ ಎಂದು ವದಂತಿ ಹರಿಬಿಡುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.