ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು

ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು

ಜಿಲ್ಲೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಸಹಕಾರ ಇಲಾಖೆಯ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ನಿರ್ದೇಶನ

ದಾವಣಗೆರೆ,ಏ.3- ಜಿಲ್ಲೆಯಲ್ಲಿ ಬೇಸಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಸಹಕಾರ ಇಲಾಖೆಯ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಸೂಚನೆ ನೀಡಿದರು.

ಸೋಮವಾರ ಜಿಲ್ಲಾಡಳಿತ ತುಂಗಭದ್ರಾ ಸಭಾಂಗಣದಲ್ಲಿ ಬೇಸಿಗೆ ಕುಡಿಯುವ ನೀರು ಹಾಗೂ ಇತರೆ ಪ್ರಗತಿ ಪರಿಶೀಲನೆ ನಡೆಸಿದ ಅವರು,  ಚುನಾವಣಾ ಸಂದರ್ಭವಾಗಿರುವುದ ರಿಂದ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಹಾಗೂ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಡಿಸೆಂಬರ್ ಉತ್ತಮ ಮಳೆಯಾಗಿದೆ. ಕೆರೆ, ಕಟ್ಟೆ ತುಂಬಿವೆ.ಸದ್ಯದಲ್ಲಿ ನೀರಿನ ಅಭಾವ ಇರುವುದಿಲ್ಲ. ಆದ್ಯಾಗೂ ಮುನ್ನೆಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಈ ವೇಳೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಹಿಟ್ನಾಳ್,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್,  ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ, ಡಿ.ಡಿ.ಪಿ.ಐ. ತಿಪ್ಪೇಶಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

error: Content is protected !!