ಚೆಕ್ ಪೋಸ್ಟ್‌ಗಳ ಕಾರ್ಯವೈಖರಿ ಪರಿಶೀಲನೆ

ಮೊಳಕಾಲ್ಮೂರು, ಏ.3- ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್‌ಗಳ ಕಾರ್ಯ ವೈಖರಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ  ಪರಿಶೀಲಿಸಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ 35 ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಎಲ್ಲಾ ಕಡೆ 24X7 ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ರೀತಿಯ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಇದಕ್ಕೆ ಮೂರು ಪಾಳಿಗಳಲ್ಲಿ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ ದಿವ್ಯಪ್ರಭು  ಹೇಳಿದ್ದಾರೆ.

ಜನರಿಗೆ ಆಮಿಷವೊಡ್ಡಲು ಅನೇಕ ಪ್ರಯತ್ನಗಳು ನಡೆಯುವ ಸಾಧ್ಯತೆಗಳಿವೆ. ನಗದು, ಸೀರೆ, ಕುಕ್ಕರ್, ಪಾತ್ರೆ, ಬಟ್ಟೆಗಳು ಸೇರಿದಂತೆ ಅನೇಕ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಣೆ ಮಾಡುವ ಸಂಭವವಿರುತ್ತದೆ. ಹೀಗಾಗಿ ಮೈಯೆಲ್ಲಾ ಕಣ್ಣಾಗಿ, ವಾಹನಗಳ ತಪಾಸಣೆ ನಡೆಸಬೇಕು. ತಪಾಸಣೆ ಕಾರ್ಯದ ವಿಡಿಯೋ ಚಿತ್ರೀಕರಣ ಮಾಡಬೇಕು. ಸಾಗಣೆ ಬಗ್ಗೆ ಸಂಶಯ ಬಂದಲ್ಲಿ ತಪಾಸಣೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಕಣಕುಪ್ಪೆ, ಎದ್ದಲ ಬೊಮ್ಮನಹಟ್ಟಿ, ಬಳ್ಳಾರಿ ಗಡಿಯ ಕೇಂದ್ರಗಳಿಗೆ ಭೇಟಿ ನೀಡಿದ್ದರು. ಎಂಸಿಸಿ ನೋಡಲ್ ಅಧಿಕಾರಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್. ದಿವಾಕರ್, ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್, ತಹಶೀಲ್ದಾರ್ ಎಂ.ವಿ. ರೂಪಾ ಇದ್ದರು.

error: Content is protected !!