ದಾವಣಗೆರೆ, ಏ. 7- ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ಅಕ್ರಮಗಳ ಕುರಿತು ಮಾಹಿತಿ ನೀಡಲು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಯಲ್ಲಿ 24 ಗಂಟೆ ಕಾರ್ಯ ನಿರ್ವಹಿಸುವ ದೂರು ನಿರ್ವಹಣಾ ಶಾಖೆ ಸ್ಥಾಪಿ ಸಲಾಗಿದೆ. ಸಾರ್ವಜನಿಕರು ಶಾಖೆಯ ಸಹಾಯವಾಣಿ ಸಂ-18004251342 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್. ಲೋಕೇಶ್ ತಿಳಿಸಿದ್ದಾರೆ.
January 12, 2025