ದಾವಣಗೆರೆ,ಏ.7- ದಾವಣಗೆರೆ ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಅವಿನಾಶ್ ಬಂದೋಳ್ ಅವರನ್ನು ನೇಮಕ ಮಾಡಲಾಗಿದೆ ಎಂದು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್ ತಿಳಿಸಿದ್ದಾರೆ.
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರುಗಳ ಶಿಫಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ.