ದಾವಣಗೆರೆ, ಏ.9- ಕೀರ್ತಿಶೇಷ ಪಿ.ಆರ್. ತಿಪ್ಪೇಸ್ವಾಮಿ ಜನ್ಮ ಶತಾಬ್ದಿ ಅಂಗವಾಗಿ ಇದೇ ದಿನಾಂಕ 16ರಂದು ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಿರುವುದಾಗಿ ದಾವಣಗೆರೆ ಚಿತ್ರಕಲಾ ಪರಿಷತ್ ಅಧ್ಯಕ್ಷ ಸದಾನಂದ ಹೆಗಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9.30ಕ್ಕೆ ಶಿವಯೋಗ ಮಂದಿರದ ಆವರಣದಲ್ಲಿ ಸ್ಪರ್ಧೆಗಳು ನಡೆಯಲಿವೆ. ಎಲ್‌ಕೆಜಿ ಯಿಯಂದ 2ನೇ ತರಗತಿ, 3ನೇ ತರಗತಿಯಿಂದ 6ನೇ ತರಗತಿ, 7 ರಿಂದ 10ನೇ ತರಗತಿ ಹಾಗೂ ಹವ್ಯಾಸಿಗಳ ಗುಂಪು ಹೀಗೆ ನಾಲ್ಕು ಗುಂಪುಗಳಲ್ಲಿ ಸ್ಪರ್ಧೆಗಳು ನಡೆಯಲಿದೆ. ಪಿಯುಸಿ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಯೋಮಾನದವರು ಭಾಗವಹಿಸಬಹುದಾಗಿದೆ. ವಿವರಕ್ಕೆ ಸಂಪರ್ಕಿಸುವ ಮೊಬೈಲ್ ಸಂಖ್ಯೆ : 9448345584, 9538732777, 9916468579, 9343402497.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಡಿ.ಶೇಷಾಚಲ, ಜಂಟಿ ಕಾರ್ಯದರ್ಶಿ ಶಾಂತಯ್ಯ ಪರಡಿಮಠ, ಗಣೇಶ ಶೆಣೈ ಉಪಸ್ಥಿತರಿದ್ದರು.