ಕರವೇ ಮಹಿಳಾ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಅಮೀರ ಬಾನು

ದಾವಣಗೆರೆ, ಫೆ.17 – ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಜಿಲ್ಲಾ ಗೌರವಾಧ್ಯಕ್ಷರಾಗಿ ಶ್ರೀಮತಿ ಅಮೀರ ಬಾನು ಅವರನ್ನು ಆಯ್ಕೆ ಮಾಡಲಾಯಿತು. 

ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಮ್ಮ ಅವರನ್ನು ಇಂದು ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಬಸಮ್ಮ ಅವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಮಾತನಾಡಿ ನಾಡು, ನುಡಿ, ಭಾಷೆ, ಸಂಸ್ಕೃತಿ ಕನ್ನಡಿಗರ ಬದುಕನ್ನು ಕಟ್ಟುವ ನಿಟ್ಟಿನಲ್ಲಿ ಸಂಘಟನಾತ್ಮಕವಾಗಿ ಕಾರ್ಯಪ್ರವೃತ್ತ ರಾಗಬೇಕು, ಸಂಘಟನೆಯಲ್ಲಿ ಮಹಿಳೆಯರನ್ನು ಅತಿ ಹೆಚ್ಚು ತೊಡಗಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಘಟಕದ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ ಶ್ರೀಮತಿ ಮಂಜುಳ ಮಾಂತೇಶ್, ಜಿಲ್ಲಾ ಕೋಶಾಧಿಕಾರಿ ರವಿಕುಮಾರ್ ಉದ್ದಿಮೆದಾರರ ಘಟಕದ ಉಪಾಧ್ಯಕ್ಷ ಮಹೇಶ್ವರಪ್ಪ ನಗರ ಘಟಕ ಅಧ್ಯಕ್ಷ ಜಿ.ಎಸ್. ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು

error: Content is protected !!