ಉಕ್ಕಡಗಾತ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಜಯಮ್ಮ

ಮಲೇಬೆನ್ನೂರು, ಮಾ.2- ಉಕ್ಕಡಗಾತ್ರಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಗೋವಿನಹಾಳ್ ಗ್ರಾಮದ ಶ್ರೀಮತಿ ಜಯಮ್ಮ ಕೋಂ ಎ.ಪಿ.ರಂಗಪ್ಪ ಅವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಮತಿ ಸಾಕಮ್ಮ ದೇವೇಂದ್ರಪ್ಪ ಅವರ ರಾಜೀನಾಮೆಯಿಂದಾಗಿ ಉಪಾಧ್ಯಕ್ಷ ಸ್ಥಾನ ತೆರವಾಗಿತ್ತು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಮಕೃಷ್ಣ ಅವರು ಚುನಾವಣಾಧಿಕಾರಿಯಾಗಿದ್ದರು. ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಕರಿಬಸಮ್ಮ, ಪಿಡಿಓ ರಾಮನಗೌಡ ಮತ್ತು ಇತರರು ಈ ವೇಳೆ ಹಾಜರಿದ್ದರು.

error: Content is protected !!