ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಭೇಟಿ ಮಾಡಿದ ಜಿಲ್ಲಾಧ್ಯಕ್ಷ ವಾಮದೇವಪ್ಪ

ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ  ಭೇಟಿ ಮಾಡಿದ ಜಿಲ್ಲಾಧ್ಯಕ್ಷ ವಾಮದೇವಪ್ಪ

ದಾವಣಗೆರೆ, ಮಾ. 14- ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಾಲಯದಲ್ಲಿ ಕೇಂದ್ರ ಸಾಹಿತ್ಯ ಪರಿಷತ್ ಅಧ್ಯಕ್ಷರೂ, ನಾಡೋಜ ಡಾ. ಮಹೇಶ್ ಜೋಶಿ ಅವರನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಅವರು ನಿನ್ನೆ ಭೇಟಿ ಮಾಡಿ, ಪರಿಷತ್ತಿನ ಅಭಿವೃದ್ಧಿ, ಸಾಹಿತ್ಯಿಕ ಚಟುವಟಿಕೆಗಳ ಬಗ್ಗೆ ಚರ್ಚಿಸಿದ್ದಾರೆ.

ಜಿಲ್ಲಾ ಸಮ್ಮೇಳನ, ತಾಲ್ಲೂಕು ಸಮ್ಮೇಳನಗಳ ಬಗ್ಗೆ ವಾಮದೇವಪ್ಪ ಅವರು ರಾಜ್ಯಾಧ್ಯಕ್ಷರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ನಂತರ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ನೇ.ಬಾ. ರಾಮಲಿಂಗಶೆಟ್ಟಿ, ಡಾ. ಪದ್ಮಿನಿ ನಾಗರಾಜ್, ಗೌರವ ಕೋಶಾಧ್ಯಕ್ಷ ಬಿ.ಎಂ. ಪಾಟೀಲ್, ಮಾಧ್ಯಮ ಪ್ರತಿನಿಧಿ ಶ್ರೀನಾಥ್, ವ್ಯವಸ್ಥಾಪಕ ಪಾಶ್ವನಾರ್ಥ್ ಮುಂತಾದವರನ್ನೂ ಸಹ ವಾಮದೇವಪ್ಪ ಭೇಟಿ ಮಾಡಿದ್ದಾರೆ.