ಮೈಸೂರು ಪಾಲಿಕೆ ಮಾಜಿ ಸದಸ್ಯ ಅಯೂಬ್ ಖಾನ್ ವಿರುದ್ಧ ಕ್ರಮಕ್ಕೆ ಆಗ್ರಹ

ದಾವಣಗೆರೆ, ಫೆ. 9- ಭಗವಾನ್ ಗೊಮ್ಮಟೇಶ್ವರ ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಮೈಸೂರಿನ ಮಹಾನಗರ ಪಾಲಿಕೆ ಮಾಜಿ ಸದಸ್ಯ ಅಯೂಬ್ ಖಾನ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ನಗರದ ಶ್ರೀ ಮಹಾವೀರ ಸಂಘ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಿಗೆ  ಮನವಿ ಸಲ್ಲಿಸಿದೆ.

ದಿಗಂಬರ ಜೈನ ಸಮಾಜದವರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ. ಸಮಾಜದ ಸ್ವಾಸ್ಥ್ಯ ಕೆಡಿಸುವ ದುರುದ್ಧೇಶದಿಂದ ಹೇಳಿಕೆ ನೀಡಿದ್ದಾರೆಂದು ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ದೂರಿದರು. ಸಂಘದ ಪದಾಧಿಕಾರಿಗಳಾದ ಸುನಿಲ್ ಕುಮಾರ್, ಪ್ರೀತಮ್, ಕೋಮಲ್, ರಾಜು ಮತ್ತಿತರರು ಭಾಗವಹಿಸಿದ್ದರು.

error: Content is protected !!