ದೆಹಲಿಯಲ್ಲಿ ಖರ್ಗೆ ಭೇಟಿ ಮಾಡಿದ ಎಸ್ಸೆಸ್

ದೆಹಲಿಯಲ್ಲಿ ಖರ್ಗೆ ಭೇಟಿ ಮಾಡಿದ ಎಸ್ಸೆಸ್

ದಾವಣಗೆರೆ, ಮಾ. 15- ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಸಚಿವರು, ಶಾಸಕರೂ ಆದ ಡಾ. ಶಾಮನೂರು ಶಿವಶಂಕರಪ್ಪ ಅವರು ಇಂದು ರಾತ್ರಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಭೇಟಿ ಮಾಡಿದರು.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ರೇಣುಕಾ ಪ್ರಸನ್ನ ಮತ್ತಿತರರಿದ್ದರು.