ದಾವಣಗೆರೆ, ಮಾ. 15 – ಡಾ. ಆನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಹಾಗೂ ಶಿಬಿರ ಕೇಂದ್ರ ದೊಡ್ಡಬಳ್ಳಾಪುರ (ಬೆಂಗಳೂರು) ನಲ್ಲಿ ನಡೆದ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ 104 ನೇ ರಾಜ್ಯ ಪರಿಷತ್ ಸಭೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಾವಣಗೆರೆ ಜಿಲ್ಲಾ ಸಂಸ್ಥೆಗೆ ಬೆಂಗಳೂರು ವಿಭಾಗ ಮಟ್ಟದಲ್ಲಿ ಉತ್ತಮ ಆಡಳಿತಕ್ಕೆ ಪ್ರಥಮ ಸ್ಥಾನ ಬಂದಿದ್ದು ವಿ.ಪಿ. ದೀನದಯಾಳು ನಾಯ್ಡು ಪಾರಿತೋಷಕವನ್ನು ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ನೀಡಿದರು.
ಈ ಸಂದರ್ಭದಲ್ಲಿ ಮುರುಘರಾಜೇಂದ್ರ ಜೆ. ಚಿಗಟೇರಿ ಜಿಲ್ಲಾ ಮುಖ್ಯ ಆಯುಕ್ತರು, ಎ.ಪಿ ಷಡಾಕ್ಷರಪ್ಪ, ಜಿಲ್ಲಾ ಸ್ಕೌಟ್ ಆಯುಕ್ತರು, ಶ್ರೀಮತಿ ರತ್ನ ಜಿಲ್ಲಾ ಕಾರ್ಯದರ್ಶಿ, ಎಚ್.ಎಸ್ ಸಿದ್ದೇಶ್ ಜಿಲ್ಲಾ ಸಹ ಕಾರ್ಯದರ್ಶಿ, ಲೀಡರ್, ಟ್ರೈನರ್ ಡಿ.ಬಸವರಾಜ್ ಮತ್ತು ಶ್ರೀಮತಿ ಅಶ್ವಿನಿ ಎಸ್‌ಜಿವಿ ಉಪಸ್ಥಿತರಿದ್ದರು.