`ಸಿರಿಧಾನ್ಯ ನಡಿಗೆ, ಆರೋಗ್ಯದ ಕಡೆಗೆ’ ಜಾಥಾ

`ಸಿರಿಧಾನ್ಯ ನಡಿಗೆ, ಆರೋಗ್ಯದ ಕಡೆಗೆ’ ಜಾಥಾ

ದಾವಣಗೆರೆ, ಮಾ. 15- ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ಸಿರಿಧಾನ್ಯ ಬೆಳೆಗಳನ್ನು ಬೆಳೆಸುವ ಹಾಗೂ ಬಳಸುವ ಕುರಿತು ಜಾಗೃತಿ ಮೂಡಿಸಲು ಬುಧವಾರ ನಗರದಲ್ಲಿ `ಸಿರಿಧಾನ್ಯ ನಡಿಗೆ, ಆರೋಗ್ಯದ ಕಡೆಗೆ’ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಇಲ್ಲಿನ ವಿದ್ಯಾನಗರದ ಶ್ರೀ ಆಂಜನೇಯ ದೇವಸ್ಥಾನದಿಂದ ಬೆಳಿಗ್ಗೆ ಆರಂಭವಾದ ಜಾಥಾ ಗುಂಡಿ ಸರ್ಕಲ್ ಮುಖಾಂತರ, ಲಕ್ಷ್ಮಿ ಫ್ಲೋರ್‍ಮಿಲ್ ಮಾರ್ಗವಾಗಿ ಸರ್ಕಾರಿ ನೌಕರರ ಭವನಕ್ಕೆ ಬಂದು ತಲುಪಿತು.

ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ದಾವಣಗೆರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಿರಿಧಾನ್ಯಗಳ ಬಳಕೆ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಿರಿಧಾನ್ಯಗಳನ್ನು ದಿನಿ ನಿತ್ಯದ ಆಹಾರ ಪದ್ಧತಿಯಾಗಿ ರೂಪಿಸಿಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಉಪ ನಿರ್ದೇಶಕ ತಿಪ್ಪೇಸ್ವಾಮಿ, ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ, ರಾಜ್ಯ ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಲೋಕಿಕೆರೆ ನಾಗರಾಜ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎ.ಆರ್. ಉಜ್ಜಿನಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಾಲಾಕ್ಷಿ ಸೇರಿದಂತೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಕೃಷಿ ಇಲಾಖೆ,  ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಸದಸ್ಯರುಗಳು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರುಗಳು, ಕೃಷಿ ಪರಿಕರ ಮಾರಾಟಗಾರರ ಸಂಘದ ಸದಸ್ಯರು, ವಿವಿಧ ಇಲಾಖೆಗಳ ನೌಕರರು ಭಾಗವಹಿಸಿದ್ದರು.