ಮಲೇಬೆನ್ನೂರು, ಮಾ. 13- ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರಿಗೆ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಎಪಿಎಂಸಿ ಮಾಜಿ ಅಧ್ಯಕ್ಷ ಜಿ. ಮಂಜುನಾಥ್ ಪಟೇಲ್ ಅವರು, ಧ್ರುವನಾರಾಯಣ ಅವರು ರಾಜಕಾರಣದಲ್ಲಿ ಅಜಾತ ಶತ್ರುಗಳಾಗಿದ್ದರು. ಅವರ ನಿಧನದಿಂದಾಗಿ ಅವರ ಕುಟುಂಬಕ್ಕಷ್ಟೇ ಅಲ್ಲ, ಕಾಂಗ್ರೆಸ್ ಪಕ್ಷಕ್ಕೂ ಹಾಗೂ ಅವರ ಅಸಂಖ್ಯಾತ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ಅಬೀದ್ ಅಲಿ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧ್ರುವನಾರಾಯಣ ಅವರು ಪಕ್ಷವನ್ನು ಉತ್ತಮವಾಗಿ ಸಂಘಟಿಸುವ ಜೊತೆಗೆ ಎಲ್ಲಾ ಕಾರ್ಯಕರ್ತರ ಪ್ರೀತಿಗೆ ಪಾತ್ರರಾಗಿದ್ದರು ಎಂದರು.
ತಾ. ಹಿಂದುಳಿದ ವರ್ಗಗಳ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ. ಗಂಗಾಧರ್, ಪುರಸಭೆ ಸದಸ್ಯ ಸಾಬೀರ್ ಅಲಿ, ಮಾಜಿ ಸದಸ್ಯ ಎ. ಆರೀಫ್ ಅಲಿ, ಎಂ.ಬಿ. ರುಸ್ತುಂ, ಎಳೆಹೊಳೆ ಕುಮಾರ್, ಪೂಜಾರ್ ಬೀರಪ್ಪ, ಡಿ.ಕೆ. ಸಿದ್ದನಗೌಡ, ಯಲವಟ್ಟಿ ಕೊಟ್ರೇಶ್ ನಾಯ್ಕ ಮತ್ತಿತರರು ಭಾಗವಹಿಸಿದ್ದರು.