ಭ್ರಷ್ಟಾಚಾರಕ್ಕೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮತ್ತು ಸಂಸದ ಜಿ.ಎಂ.ಸಿದ್ದೇಶ್ವರ ಅವರುಗಳು ಕಾರಣವೆಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ.
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು ಜಿಲ್ಲಾ ಸಚಿವರು, ಸಂಸದರ ವಿರುದ್ಧ ಇಂದು ಬೆಳಿಗ್ಗೆ 11-30 ಗಂಟೆಗೆ ಅಶೋಕ ಚಿತ್ರಮಂದಿರ ರೈಲ್ವೆ ಗೇಟ್ ಬಳಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.