ನಗರಕ್ಕೆ ಇಂದು ಧರ್ಮೇಂದ್ರ ಪ್ರಧಾನ್‌ ಹಾಗೂ ಅರುಣ್ ಸಿಂಗ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಗಳು ಹಾಗೂ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಕೇಂದ್ರ ಸಚಿವರೂ ಆಗಿರುವ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಪ್ರಭಾರಿ ಧರ್ಮೇಂದ್ರ ಪ್ರಧಾನ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಿಜಯ ಸಂಕಲ್ಪ ಮಹಾಸಂಗಮ ಕಾರ್ಯಕ್ರಮದ ಸ್ಥಳ ಮತ್ತು ವ್ಯವಸ್ಥೆಯ ಪ್ರಗತಿಯನ್ನು ವೀಕ್ಷಿಸಲು ಆಗಮಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಡಿ.ಎಸ್.ಶಿವಶಂಕರ್ ತಿಳಿಸಿದ್ದಾರೆ.