ದಾವಣಗೆರೆ, ಮಾ.17- ಕರ್ನಾ ಟಕ ಸರ್ಕಾರ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಮತ್ತು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ) ಇವರ ಸಂಯುಕ್ತಾಶ್ರಯದಲ್ಲಿ ಶಿಶುಕ್ಷು ಮೇಳವನ್ನು ಇದೇ ದಿನಾಂಕ 20 ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಮೇಳದಲ್ಲಿ ಹಲವು ಕಂಪನಿಗಳು ಪಾಲ್ಗೊಳ್ಳುತ್ತಿದ್ದು, ವಿವಿಧ ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದು. ವಿವರಕ್ಕೆ ಸಂಪ ರ್ಕಿಸುವ ಮೊಬೈಲ್ : 99022 32155, 831027 3541.