ದಾವಣಗೆರೆ, ಮಾ. 17- ನಗರದ ಕೆ.ಆರ್. ರಸ್ತೆಯಲ್ಲಿರುವ ಭಾರತೀಯ ಜೀವ ವಿಮಾ ನಿಗಮದ ಕಚೇರಿಯಲ್ಲಿ ನಿನ್ನೆ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕಚೇರಿ ದಾಖಲೆಗಳು ಬೆಂಕಿಗಾಹು ತಿಯಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದ್ದು, ಗುರುವಾರ ತಡರಾತ್ರಿ ಚಿಕ್ಕದಾಗಿಸಿಕೊಂಡ ಬೆಂಕಿ, ನೋಡು ನೋಡುತ್ತಿದ್ದಂತೆ ಇಡೀ ಕಚೇರಿ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಧಾವಿಸಿ ಬಂದು ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
March 26, 2023