ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘ ಜಿಲ್ಲಾ ಘಟಕದ ವತಿಯಿಂದ ಇಂದು ಬೆಳಿಗ್ಗೆ 11.30ಕ್ಕೆ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬ ಆಚರಿಸಲಾಗುತ್ತಿದೆ.
ನಿಟುವಳ್ಳಿಯ ಚಾಮುಂಡೇಶ್ವರಿ ಟಾಕೀಸ್ ಮುಂಭಾಗ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಶ್ರೀಮತಿ ಸವಿತಾ ಹುಲ್ಲುಮನೆ ಗಣೇಶ್, ಪ್ರವೀಣ್ ಹುಲ್ಲಮನೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಯೋಗೀಶ್ ತಿಳಿಸಿದ್ದಾರೆ.