ತ್ಯಾವಣಿಗಿಯಲ್ಲಿ ಇಂದು ಮಹಿಳಾ ಸಮಾವೇಶ, ನಗೆಹಬ್ಬ

ಮಾಯಕೊಂಡ ವಿಧಾನಸಭಾ ಕ್ಷೇತ್ರದ ತ್ಯಾವಣಿಗಿ ಗ್ರಾಮದ ನೀರಾವರಿ ಇಲಾಖೆ ಆವರಣ ದಲ್ಲಿ ಇಂದು ಸಂಜೆ 5 ಗಂಟೆಗೆ ಬಿ.ಎಂ. ವಾಗೀಶ ಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಮಾವೇಶ ಮತ್ತು ನಗೆಹಬ್ಬ-2023 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಸರಾಂತ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ್, ಪ್ರೊ. ಕೃಷ್ಣೇಗೌಡ, ನರಸಿಂಹ ಜೋಶಿ, ಬಸವರಾಜ ಮಾಮನಿ, ಶ್ರೀಮತಿ ಇಂದುಮತಿ ಸಾಲಿಮಠ ಅವರುಗಳು ಹಾಸ್ಯ ಸಂಜೆ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ.