ನಗರಕ್ಕೆ ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್

 ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಸಹಕಾರ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಇಂದು ನಗರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 11 ಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆಯುವ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 3.30 ಕ್ಕೆ ಸ್ಮಾರ್ಟ್ ಸಿಟಿ ಬೋರ್ಡ್ ಮೀಟಿಂಗ್ ನಲ್ಲಿ ಭಾಗವಹಿಸುವರು.