ದಾವಣಗೆರೆ, ಫೆ.10- ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ನದಿಗೆ ಕಾರು ಉರುಳಿ ಕೆಳಗೆ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡು ಸಾವಿಗೀಡಾಗಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಭದ್ರಾ ನದಿಯ ಹೊಸ ಸೇತುವೆಯಲ್ಲಿ ಇಂದು ನಡೆದಿದೆ. ಹೊನ್ನಾಳಿ ತಾಲ್ಲೂಕಿನ ರಾಂಪುರ ಗ್ರಾಮದ ಹರ್ಷಿತ್ (27) ಸಾವಿಗೀಡಾದ ಕಾರು ಚಾಲಕ.
ಗೊಲ್ಲರಹಳ್ಳಿಯಿಂದ ಹೊನ್ನಾಳಿಗೆ ಬರುವಾಗ ಹೊನ್ನಾಳಿ ಬಳಿಯ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಮೇಲಿಂದ ಕಾರು ಕೆಳಗೆ ಉರುಳಿ ಬಿದ್ದಿದೆ. ಪರಿ ಣಾಮ ಚಾಲಕ ಹರ್ಷಿತ್ ತೀವ್ರವಾಗಿ ಗಾಯಗೊಂಡಿದ್ದ.
ಸ್ಥಳಕ್ಕಾಗಮಿಸಿದ ಪಿಎಸ್ಐ ಬಸನಗೌಡ ಬಿರಾದಾರ ಪರಿಶೀಲನೆ ನಡೆಸಿ, ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರೂ ಗಾಯಾಳು ಹರ್ಷಿತ್ ಬದುಕುಳಿದಿಲ್ಲ.
ಚಾಲಕ ಅತಿ ವೇಗವಾಗಿ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.