ರಸ್ತೆ ಬದಿಯ ಹಣ್ಣಿನ ಅಂಗಡಿ ಬೆಂಕಿಗಾಹುತಿ

ದಾವಣಗೆರೆ, ಫೆ.22- ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಣ್ಣಿನ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಲ್ಲಿನ ಜಿಲ್ಲಾ ಕ್ರೀಡಾಂಗಣ ಸಮೀಪದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.

ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಯೊಂದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿ ಸಹಿತ ಹಣ್ಣುಗಳು ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದು ಘಟನಾ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳವು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

error: Content is protected !!