ದಾವಣಗೆರೆ, ನ.21- ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿ, 5 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.
ಹೆಚ್. ಕಲಪನಹಳ್ಳಿ ರಾಷ್ಟ್ರೀಯ ಹೆದ್ದಾರಿ-48 ರ ಸರ್ವಿಸ್ ರಸ್ತೆ ಬಳಿ ಜೂಜಾಟದ ವೇಳೆ ದಾಳಿ ನಡೆಸಲಾಗಿದೆ. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣದ ಮತ್ತೋರ್ವ ಆರೋಪಿಯನ್ನು ಬಂಧಿಸಿ, 3 ಮೊಬೈಲ್ ಫೋನ್ಗಳು ಹಾಗೂ ಇತರೆ ತಾಂತ್ರಿಕ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.