ಪತ್ರಕರ್ತ ಜಗದೀಶ್‌ ವಿರುದ್ಧ ಮೊಕದ್ದಮೆ

ದಾವಣಗೆರೆ, ಅ.31- ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಪತ್ರಕರ್ತ ಜಗದೀಶ್‌ ವಿರುದ್ಧ ಮಾಯಕೊಂಡ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ ದಾಖ ಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆಸಲು ಸಂಬಂಧಿಸಿದ ಇಲಾಖೆಯಿಂದ ಹಣ ಮಂಜೂರು ಮಾಡಿಸುವುದಾಗಿ ರೈತರನ್ನು ನಂಬಿಸಿ ಹಣ ವಸೂಲಿ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!