ಲೋಕಿಕೆರೆ ರಸ್ತೆಯಲ್ಲಿ ಅಪಘಾತ : ಸಾವು

ದಾವಣಗೆರೆ, ನ.2- ಬೈಕ್‌ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಲೋಕಿಕೆರೆ ರಸ್ತೆಯಲ್ಲಿ ಇಂದು ನಡೆದಿದೆ.

ಲೋಕಿಕೆರೆಯ ಬೀರೇಶ್ (40) ಮೃತಪಟ್ಟ ಸವಾರ. ಗ್ರಾಮಕ್ಕೆ ವಾಪ ಸ್ಸಾಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ತಲೆಗೆ ಗಂಭೀರವಾಗಿ ಗಾಯವಾದ ಪರಿಣಾಮ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!