ದಾವಣಗೆರೆ, ಡಿ.6- ಮೊಬೈಲ್ ಅಂಗಡಿ ಬೀಗ ಮುರಿದು ಸುಮಾರು 2 ಲಕ್ಷ ರೂ. ಮೌಲ್ಯದ ಸೆಕೆಂಡ್ ಹ್ಯಾಂಡ್ ಮೊಬೈಲ್ ಹ್ಯಾಂಡ್ ಸೆಟ್‍ಗಳನ್ನು ಕಳವು ಮಾಡಿದ ಘಟನೆ ನಗರದ ಕೆಬಿ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಬಿಜೆಪಿ ಕಚೇರಿ ಸಮೀಪದ ಶಶಿ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಯ ಶೆಟ್ರಸ್ ಬೀಗವನ್ನು ಮುರಿದು ಒಳ ಪ್ರವೇಶಿಸಿರುವ ಕಳ್ಳರು ಹೊಸ, ಹಳೆಯ ಮೊಬೈಲ್ ಮತ್ತಿತರೆ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ.