ಹರಪನಹಳ್ಳಿ, ಡಿ.5 – ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ ಘಟನೆ, ತಾಲ್ಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ತಡವಾಗಿ ವರದಿಯಾಗಿದೆ. 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈ ಸಂಬಂಧ ಸಂತ್ರಸ್ತೆ ತಾಯಿ ನೀಡಿದ ದೂರನ್ನು ಹರಪನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಾದ ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ಬಳ್ಳಾರಿಯ ಜೆ.ಜೆ. ಬೋರ್ಡ್‍ಗೆ ಒಪ್ಪಿಸಲಾಗಿದೆ ಎಂದು ಡಿವೈಎಸ್ಪಿ ಹಾಲಮೂರ್ತಿ ರಾವ್ ತಿಳಿಸಿದ್ದಾರೆ.
January 24, 2025