ಬೆಂಗಳೂರು, ಆ. 12 – ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಒಂದು ಚಿತ್ರದುರ್ಗ ಜಿಲ್ಲೆಯ ಹೆದ್ದಾರಿಯಲ್ಲಿ ಸಾಗುವಾಗ ಬೆಂಕಿ ಕಾಣಿಸಿಕೊಂಡಿದ್ದು ಐವರು ಸಾವನ್ನಪ್ಪಿದ್ದಾರೆ.
ಬೆಳಗಿನ ಜಾವ 3.30ರ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಾಗುತ್ತಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಬಿಜಾಪುರದಿಂದ ಬೆಂಗಳೂ ರಿಗೆ ತೆರಳುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಮೃತರಲ್ಲಿ ಮೂರು ಮಕ್ಕಳೂ ಸಹ ಸೇರಿದ್ದು, ಗಾಯಗೊಂಡ ಹಲವರನ್ನು ಆಸ್ಪತ್ರೆಗೆ ದಾಖಲಿಸ ಲಾಗಿದೆ. ಬಸ್ ರಸ್ತೆ ಬದಿಯಲ್ಲಿ ನಿಂತಾಗ ಬೆಂಕಿ ಕಾಣಿಸಿ ಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.