ಗುಜರಾತ್‌ ಸೋಮನಾಥ ದೇವಾಲಯ ಟ್ರಸ್ಟ್‌ ಅಧ್ಯಕ್ಷರಾಗಿ ಮೋದಿ

ಗುಜರಾತ್‌ ಸೋಮನಾಥ ದೇವಾಲಯ ಟ್ರಸ್ಟ್‌ ಅಧ್ಯಕ್ಷರಾಗಿ ಮೋದಿ - Janathavaniಅಹಮದಾಬಾದ್, ಜ. 18 – ಗುಜರಾತ್‌ನ ಪ್ರಭಾಸ್ ಪಟನ್ ನಗರದಲ್ಲಿರುವ ವಿಶ್ವ ಪ್ರಸಿದ್ಧ ಶ್ರೀ ಸೋಮವಾಥ ದೇವಾಲಯದ ಟ್ರಸ್ಟ್‌ನ ನೂತನ ಅಧ್ಯಕ್ಷರನ್ನಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ನೇಮಿಸಲಾಗಿದೆ.

ಮೋದಿ ಅವರು ಶ್ರೀ ಸೋಮನಾಥ ಟ್ರಸ್ಟ್‌ನ ಟ್ರಸ್ಟೀಗಳಲ್ಲಿ ಒಬ್ಬರಾಗಿದ್ದರು. ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ದೇವಾಲಯದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಹಿಂದೆ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಪ್ರಧಾನ ಮಂತ್ರಿಯೊಬ್ಬರು ಟ್ರಸ್ಟ್ ಅಧ್ಯಕ್ಷರಾಗಿರುವುದು ಎರಡನೇ ಬಾರಿ. ಈ ಹಿಂದೆ ಟ್ರಸ್ಟ್ ಅಧ್ಯಕ್ಷರಾಗಿದ್ದ ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ನಿಧನದ ನಂತರ ಅಧ್ಯಕ್ಷ ಸ್ಥಾನ ಖಾಲಿ ಉಳಿದಿತ್ತು.

error: Content is protected !!