ಬೆಂಗಳೂರು, ಏ. 6 – ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ ಎಂ. ಕವಟಗಿಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹಾಮಂಡಳದ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಈ ಇಬ್ಬರು ಮಾತ್ರ ಅಭ್ಯರ್ಥಿಗಳಾಗಿದ್ದರಿಂದ ಚುನಾವಣಾಧಿಕಾರಿ ಮನೋಜ್‍ಚಂದ್ರ ಇವರುಗಳ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.