ದೇವರಹಳ್ಳಿ ಗ್ರಾ.ಪಂ. ಕಾಂಗ್ರೆಸ್ ವಶಕ್ಕೆ

ಚನ್ನಗಿರಿ, ಫೆ.10- ದೇವರಹಳ್ಳಿ ಗ್ರಾಮ ಪಂಚಾಯ್ತಿ ಕಳೆದ 25 ವರ್ಷಗಳಿಂದ ಕಾಂಗ್ರೆಸ್ ಆಡಳಿತ ಮಾಡುತ್ತಿದ್ದು, ಇತಿಹಾಸ ಸೃಷ್ಟಿ ಮಾಡಿದೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ ತಿಳಿಸಿದ್ದಾರೆ. ದೇವರ ಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾ ವಣೆ ನಂತರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಬೆಂಬಲಿತ ಅನ್ನಪೂರ್ಣಮ್ಮ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಲಕ್ಕಮ್ಮ ಆಯ್ಕೆಯಾಗಿದ್ದಾರೆ. 16 ಸದಸ್ಯರಲ್ಲಿ 11 ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಉಳಿದಂತೆ 5 ಮಂದಿ ಇತರರು ಆಯ್ಕೆಯಾಗದ್ದರು. ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದ ಹಿನ್ನೆಲೆ ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ಸಿಕ್ಕಿತು ಎಂದರು.

ಈ ಸಂದರ್ಭದಲ್ಲಿ ಪ್ರಭಾಕರ್, ವೆಂಕಟೇಶ್, ಜಿ.ಜಿ. ರಾಮಪ್ಪ, ನೀಲಪ್ಪರ ವಡ್ನಾಳ್, ಜಗದೀಶ್, ಬಿಲ್ಲಪ್ಪ, ಎ.ಆರ್. ಜಗದೀಶ್ ಇನ್ನಿತರೆ ಮುಖಂಡರು ಉಪಸ್ಥಿತರಿದ್ದರು.

error: Content is protected !!