ಮಲೇಬೆನ್ನೂರು, ಫೆ. 10 – ಕೊಕ್ಕನೂರು ಗ್ರಾ.ಪಂ. ಅಧ್ಯಕ್ಷರಾಗಿ ಓ.ಸಿ. ನಿಂಗನಗೌಡ ಮತ್ತು ಉಪಾಧ್ಯಕ್ಷರಾಗಿ ಜಿ.ಟಿ. ಕಟ್ಟೆಯ ಶ್ರೀಮತಿ ವಸಂತಮ್ಮ ಮಲ್ಲೇಶ್ ಅವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಓ. ಬಸವನಗೌಡರ ತಮ್ಮನ ಮಗ ನಿಂಗನಗೌಡ 12 ಮತಗಳನ್ನು ಪಡೆದು ಆಯ್ಕೆಯಾದರೆ, ಹಳ್ಳಿಹಾಳ್ ಗ್ರಾಮದ ಹೆಚ್.ಎನ್. ಬಸವನಗೌಡ 9 ಮತಗಳನ್ನು ಪಡೆದು ಪರಾಭವಗೊಂಡರು.
ಉಪಾಧ್ಯಕ್ಷ ಸ್ಥಾನಕ್ಕೆ ವಸಂತಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿತ್ತು.
ನೂತನ ಅಧ್ಯಕ್ಷರನ್ನು ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಕಾಡಾ ಸದಸ್ಯ ಗೋವಿನಹಾಳ್ ರಾಜಣ್ಣ, ದಿಶಾ ಕಮಿಟಿ ಸದಸ್ಯ ಐರಣಿ ಅಣ್ಣಪ್ಪ, ಜಿ.ಪಿ. ಹನುಮಗೌಡ ಮತ್ತಿತರರು ಅಭಿನಂದಿಸಿದರು.