ಜಗಳೂರು, ಜು.6- ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬಿ. ಲಕ್ಷ್ಮೀಪತಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ಪಂಚಾಯ್ತಿಯಲ್ಲಿ ಸಹಾಯಕ ಯೋಜನಾಧಿಕಾರಿ-1 ಆಗಿ ಕಾರ್ಯಭಾರ ನಿರ್ವಹಿಸುತ್ತಿದ್ದರು. ಹಿಂದಿನ ಇಒ ಮಲ್ಲನಾಯ್ಕ ಅವರು ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿಯಾಗಿ ಮುಂಬಡ್ತಿ ಹೊಂದಿದ ಹಿನ್ನೆಲೆಯಲ್ಲಿ ಖಾಲಿ ಇದ್ದ ಸ್ಥಾನಕ್ಕೆ ಲಕ್ಷ್ಮೀಪತಿ ಆಗಮಿಸಿದ್ದಾರೆ.