ದಾವಣಗೆರೆ, ಫೆ.12- ಶ್ರೀ ಶಿವಕುಮಾರಸ್ವಾಮಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಅಧ್ಯಕ್ಷರಾಗಿ ಜಿ. ಕರಿಬಸಪ್ಪ ಮತ್ತು ಉಪಾಧ್ಯಕ್ಷರಾಗಿ ಶಿವಶಂಕರಸ್ವಾಮಿ ಅವರು ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಸಹಕಾರ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಕೆ.ಜಿ. ಚುನಾವಣಾಧಿಕಾರಿಯಾಗಿದ್ದರು.