ದಾವಣಗೆರೆ, ಫೆ.15- ತಾಲ್ಲೂಕಿನ ಹುಲಿಕಟ್ಟೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಕೆರೆಯಾಗಳಹಳ್ಳಿಯ ಜಯ್ಯಮ್ಮ ದಾದಾಪ್ಳರ ಹನುಮಪ್ಪ ಮತ್ತು ಉಪಾಧ್ಯಕ್ಷರಾಗಿ ಅದೇ ಗ್ರಾಮದ ರೇಖಾ ಬಿ.ಜಿ. ಬಸವರಾಜ್ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಯಮ್ಮ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ರೇಖಾ ಬಿ.ಜಿ ಅವಿರೋಧವಾಗಿ ನೇಮಕಗೊಂಡಿದ್ದಾರೆ ಎಂದು ಗ್ರಾಪಂ ಪಿಡಿಓ ಎನ್.ಎಸ್. ಲೋಹಿತ್ ಕುಮಾರ್ ತಿಳಿಸಿದ್ದಾರೆ.