ದಾವಣಗೆರೆ, ಫೆ. 25- ಕುಂದುವಾಡ ರಸ್ತೆಯ ಎಸ್.ಎಸ್. ಬಡಾವಣೆ ಸಪ್ತಗಿರಿ ಹಾಸ್ಟೆಲ್ ಎದುರು ನೂತನವಾಗಿ ನಿರ್ಮಾಣಗೊಂಡಿರುವ ಸರ್ವಜ್ಞ ಸಮು ದಾಯ ಭವನದ ಉದ್ಘಾಟನೆ ಇದೇ 28ರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಬಸವರಾಜ ಕುಂಚೂರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸಮುದಾಯ ಭವನ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಜಿ.ಎಂ.ಸಿದ್ದೇಶ್ವರ ನೆರವೇರಿಸಲಿದ್ದಾರೆ. ಶಾಸಕ ಎಸ್.ಎ. ರವೀಂದ್ರನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು. ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನೂ ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಕೆ.ಸಿ. ಲೋಕೇಶ್, ಮೂಗ ಬಸಪ್ಪ, ತಿಪ್ಪೇಸ್ವಾಮಿ, ಕರಿಬಸಪ್ಪ, ಮುತ್ತಪ್ಪ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.