ದಾವಣಗೆರೆ, ಫೆ. 26 – ದಾವಣಗೆರೆ ತಾಲ್ಲೂಕು ಗೋಪನಾಳ್ ಗ್ರಾಮದ ಗೋಪನಾಳ್ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಹೆಚ್. ಕಾಂತರಾಜ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಹೆಚ್.ಕೆ. ಕಮಲಮ್ಮ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಎಲ್ಲಾ ಸದಸ್ಯರುಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎನ್.ವಿ. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
December 26, 2024