ದಾವಣಗೆರೆ,ಮೇ 2- ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪ ನಿರ್ದೇಶಕರಾಗಿ ಎನ್. ರಾಜು ಅವರು ಮೊನ್ನೆ ಅಧಿಕಾರ ವಹಿಸಿಕೊಂಡರು.
ಈವರೆಗೂ ಈ ಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆರ್. ನಾಗರಾಜಪ್ಪ ಅವರು ವಯೋನಿವೃತ್ತಿಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್. ರಾಜು ಅವರನ್ನು ನೇಮಕ ಮಾಡಲಾಗಿದೆ.