ದಾವಣಗೆರೆ, ಮಾ.7- ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಬಿ.ಜಿ. ರಮೇಶ್ ಅವರನ್ನು ನೇಮಕ ಮಾಡಲಾಗಿದೆ.
ವಿದ್ಯಾರ್ಥಿ ದೆಸೆಯಿಂದಲೇ ಹೋರಾಟಗಳಲ್ಲಿ ಭಾಗವಹಿಸಿದ್ದ ರಮೇಶ್, ಇತ್ತೀಚೆಗಷ್ಟೆ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿಯೂ ಕೂಡ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.