ಹೊನ್ನಾಳಿ, ಮಾ.25 – ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ದೊಡ್ಡೇರಹಳ್ಳಿ ಎ. ನಾಗೇಂದ್ರಪ್ಪ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೊಡ್ಡೇರಹಳ್ಳಿ ಎ. ನಾಗೇಂದ್ರಪ್ಪ ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ, ಜಗಳೂರಿನ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಸಿ. ಗೋಪಾಲ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.