ಶ್ರೀನಿವಾಸ್ ದಾಸಕರಿಯಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ

ಶ್ರೀನಿವಾಸ್ ದಾಸಕರಿಯಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ - Janathavaniದಾವಣಗೆರೆ,ನ.3- ನಗರದ ಯುವ ಮುಖಂಡ ಶ್ರೀನಿವಾಸ್ ದಾಸಕರಿಯಪ್ಪ ಅವರು  ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಈ ಸಂಬಂಧ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಎಂ. ವೀರೇಶ್ ಅವರ ಸೂಚನೆಯ ಮೇರೆಗೆ ಪ್ರಧಾನ ಕಾರ್ಯ ದರ್ಶಿ ಬಿ.ಎಸ್. ಜಗದೀಶ್ ಆದೇಶ ಹೊರಡಿಸಿದ್ದಾರೆ.

ಸಂತಸ : ಶ್ರೀನಿವಾಸ್ ದಾಸಕರಿಯಪ್ಪ ಅವರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡಿರುವುದು ಸಂತಸವನ್ನುಂಟು ಮಾಡಿದೆ ಎಂದು  ವಕೀಲರೂ ಆಗಿರುವ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಕಾನೂನು ಮತ್ತು ಸಂಸದೀಯ ಪ್ರಕೋಷ್ಟ ಉಪಾಧ್ಯಕ್ಷ ಹೆಚ್. ದಿವಾಕರ್, ವಕೀಲರೂ ಆಗಿರುವ ಸಂಚಾಲಕ ಎ.ಸಿ. ರಾಘವೇಂದ್ರ ತಿಳಿಸಿದ್ದಾರೆ.

ಸಂಘಟಕರಾದ ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ಬಿಜೆಪಿಯಲ್ಲಿ ಸ್ಥಾನ ಮಾನ ನೀಡಿರುವುದರಿಂದ ಪಕ್ಷಕ್ಕೆ ಬಲ ಬಂದಂತಾಗಿದೆ ಎಂದು ಅವರು ಹೇಳಿದ್ದಾರೆ.

error: Content is protected !!