ಬೆಂಗಳೂರು, ಡಿ.26-ಇಲ್ಲಿನ ಕನ್ನಲ್ಲಿ ಶ್ರೀ ವೀರಭದ್ರಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಇಪ್ಪತ್ತಾರನೆಯ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಪರಿಷತ್ತಿನ ಮಾಜಿ ಅಧ್ಯಕ್ಷರೂ, ಹಾಲಿ ಗೌರವ ಸಲಹೆಗಾರರಾಗಿದ್ದ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಅವರನ್ನು ಪರಿಷತ್ತಿನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಪರಿಷತ್ತಿನ ಗೌರವಾಧ್ಯಕ್ಷರುಗಳಾದ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಮತ್ತು ಗದುಗಿನ ತೋಂಟದಾರ್ಯ ಮಠದ ಶ್ರೀ ಸಿದ್ಧರಾಮ ಮಹಾಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.
ಪರಿಷತ್ತಿನ ಅಧ್ಯಕ್ಷರಾಗಿದ್ದ ಅಪ್ಪಾರಾವ್ ಅಕ್ಕೋಣೆ ರಾಜೀನಾಮೆ ನೀಡಿದ್ದು, ತೆರವಾಗಿದ್ದ ಸ್ಥಾನಕ್ಕೆ ಗೊ.ರು.ಚ. ಅವರನ್ನು ಆಜೀವ ಪರ್ಯಂತ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಅವರಿಗೆ 90 ವರ್ಷ ವಯಸ್ಸಾಗಿದ್ದು, ಕಣ್ಣಿನ ದೃಷ್ಟಿ ಕಡಿಮೆಯಾಗಿದೆ, ಕಿವಿಯೂ ಕೇಳಿಸದಾಗಿದೆ. ಆದರೂ ಸಹ ಸರ್ವ ಸದಸ್ಯರ ಅಪೇಕ್ಷೆಯ ಮೇರೆಗೆ ನಾನು ಕೊನೆಯ ಉಸಿರಿರುವವರೆಗೂ ಪರಿಷತ್ತಿನ ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತೇನೆಂದು ಘೋಷಿಸಿದರು.