ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸ

ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸ

 ಹೊನ್ನಾಳಿ, ಡಿ. 29 – ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. 

ರಥೋತ್ಸವದ ಪ್ರಯುಕ್ತ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು. 45 ಜೊತೆ ಮದುವೆಗಳು ನಡೆದವು. ರಾತ್ರಿ ಅಡ್ಡ ಪಲ್ಲಕ್ಕಿ ಉತ್ಸವ ನಡೆಯಿತು.

ಶ್ರೀಗುರು ಗದ್ದಿಗೇಶ್ವರ ಸ್ವಾಮಿ ಕಾರ್ತಿಕೋತ್ಸವದ ಪ್ರಯುಕ್ತ ಮಂಗಳವಾರ  ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ದೀಪ ರಥೋತ್ಸವ ಕಾರ್ಯಕ್ರಮ ವೈಭವದಿಂದ ನಡೆಯಿತು. ಶ್ರೀ ಗುರು ಗದ್ದಿಗೇಶ್ವರ ಸ್ವಾಮಿಯನ್ನು ಕೈಲಾಸ ಸಭಾ ಮಂಟಪಕ್ಕೆ ತಂದು ಪೀಠಾರೋಹಣ ಮಾಡಲಾಯಿತು.

error: Content is protected !!