ಅಮಿತ್‌ ಷಾ ವಜಾಕ್ಕೆ ಸಿಪಿಐ ಆಗ್ರಹ

ಅಮಿತ್‌ ಷಾ ವಜಾಕ್ಕೆ ಸಿಪಿಐ ಆಗ್ರಹ

ದಾವಣಗೆರೆ, ಡಿ. 23- ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಸಂಸತ್ ನಲ್ಲಿ
ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ರವರನ್ನು ಕೇಂದ್ರ ಸಚಿವ ಸಂಪುಟದಿಂದ ಕೂಡಲೇ ವಜಾ ಗೊಳಿಸುವಂತೆ ಸಿಪಿಐ ಜಿಲ್ಲಾ ಮಂಡಳಿ ಪ್ರತಿಭಟನೆ ಮಾಡುವ ಮೂಲಕ ಆಗ್ರಹಿಸಿದೆ.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ಮಾತನಾಡಿ ದೇಶದ ಇತಿಹಾಸ, ಚರಿತ್ರೆ ತಿಳಿಯದ ಮತ್ತು ದೇಶದ ಸಂಸ್ಕೃತಿ ಮತ್ತು ಸಹಬಾಳ್ವೆಯ ಪರಿಚಯ ಇಲ್ಲದ ಹಾಗೂ ವ್ಯಾಪಾರಿ ಮನೋಭಾವ ಹೊಂದಿರುವ ಇಂತಹ ಗೃಹಮಂತ್ರಿಯನ್ನು ಕೂಡಲೇ ಕೇಂದ್ರ ಸಚಿವ ಸಂಪುಟದಿಂದ ವಜಾ ಗೊಳಿಸಬೇಕೆಂದು ಮಾನ್ಯ ರಾಷ್ಟ್ರಪತಿಯವರಿಗೆ ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಕಾಂ. ಹೆಚ್ ಜಿ ಉಮೇಶ್, ಸಿ ಪಿ ಐ ಜಿಲ್ಲಾ ಮಂಡಳಿ ಸದಸ್ಯ ಜಯಣ್ಣ ಮಾತನಾಡಿದರು. 

ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಖಜಾಂಚಿ ಮೊಹಮ್ಮದ್ ರಫೀಕ್, ಮುಖಂಡರುಗಳಾದ ಮಹಮ್ಮದ್ ಭಾಷಾ ಜಗಳೂರು, ಸಿ ರಮೇಶ್, ಶೇಖರ ನಾಯಕ, ಸುರೇಶ್, ತಿಪ್ಪೇಶ್, ಜೀವನ್, ದೇವೇಂದ್ರಪ್ಪ ,ಸರೋಜ, ನಿಟುವಳ್ಳಿ ಬಸವರಾಜ್, ಕೆ.ಜಿ. ಶಿವಮೂರ್ತಿ, ತಿಮ್ಮಣ್ಣ, ಹೆಚ್ ಎಸ್ ಚಂದ್ರು, ಮರಿಯಪ್ಪ, ರಂಗನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಅಶೋಕ ರಸ್ತೆಯ ಪಂಪಾಪತಿ ಭವನದಿಂದ ಹೊರಟ ಪ್ರತಿಭಟನಾಕಾರರು ಗಾಂಧಿ ಸರ್ಕಲ್ ಗೆ ತೆರಳಿ ಬಹಿರಂಗ ಸಭೆ ನಡೆಸಿ ಮುಕ್ತಾಯಗೊಳಿಸಿದರು ನಂತರ ಎಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.

error: Content is protected !!