ದಾವಣಗೆರೆ, ಡಿ. 25- ನಗರದ ಕೆ.ಬಿ. ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಶ್ರೀ ಸೋಂದಾ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ನಿನ್ನೆ ಭೇಟಿ ನೀಡಿ ಶ್ರೀರಾಯರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶ್ರೀ ಗುರುರಾಜ ಸೇವಾ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ದಂಪತಿ ಶ್ರೀಗಳವರಿಗೆ ಪಾದ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಶ್ರೀ ಗುರುರಾಜ ಸೇವಾ ಸಂಘದ ಇತರ ಪದಾಧಿಕಾರಿಗಳು, ಸದಸ್ಯರು, ಶ್ರೀಮಠದ ಸಿಬ್ಬಂದಿ ಹಾಜರಿದ್ದರು.